ಸಂವಿಧಾನ ರಚನಾ ಸಭೆ

@ ಸಂವಿಧಾನ ರಚನಾ ಸಭೆ
#################
# ಭಾರತದ ಜನತೆ ಪ್ರಾಂತೀಯ ಸಭೆಗಳ ಸದಸ್ಯರನ್ನು ಆರಿಸಿ, ಆ ಸಭೆಗಳು ಸಂವಿಧಾನರಚನಾ ಸಭೆಯ ಸದಸ್ಯರನ್ನು ಆರಿಸಿದರು.

# ಸಂವಿಧಾನ ರಚನಾಸಭೆಯಲ್ಲಿ ಭಾರತದ ವಿವಿಧ ಪ್ರದೇಶಗಳಿಗೆ ಹಾಗೂ ಸಮುದಾಯಗಳಿಗೆ ಸೇರಿದ ಸದಸ್ಯರು ಇದ್ದರು. ಬೇರೆ ಬೇರೆ ರಾಜಕೀಯ ವಿಚಾರಧಾರೆಗಳನ್ನು ಪ್ರತಿನಿಧಿಸುವ ಸದಸ್ಯರೂ ಅಲ್ಲಿ ಇದ್ದರು.

# ಜವಾಹರ್‍ಲಾಲ್ ನೆಹರೂ,ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್, ಮೌಲಾನಾ ಅಬುಲ್ ಕಲಂ ಆಝಾದ್ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿಇವರುಗಳು ಸಭೆಯ ಚರ್ಚೆಗಳಲ್ಲಿ ಭಾಗವಹಿಸಿದ ಕೆಲವು ಪ್ರಮುಖ ವ್ಯಕ್ತಿಗಳಾಗಿದ್ದರು.

# ಪರಿಶಿಷ್ಟ ವರ್ಗಗಳಿಗೆ ಸೇರಿದ ಮೂವತ್ತಕ್ಕೂ ಹೆಚ್ಚು ಸದಸ್ಯರಿದ್ದರು ಆಂಗ್ಲೋ-ಇಂಡಿಯನ್ಸಮುದಾಯವನ್ನು ಫ್ರಾಂಕ್ ಆಂಟನಿ ಅವರೂ ಪಾರ್ಸಿ ಜನರನ್ನು ಎಚ್.ಪಿ. ಮೋದಿ ಅವರೂ ಪ್ರತಿನಿಧಿಸಿದ್ದರು. ಆಂಗ್ಲೊ-ಇಂಡಿಯನ್ನರ ಹೊರತಾದ ಎಲ್ಲ ಕ್ರೈಸ್ತರನ್ನು ಪ್ರತಿನಿಧಿಸಿದ ಖ್ಯಾತ ಕ್ರೈಸ್ತರಾದ ಹರೇಂದ್ರ ಕುಮಾರ್ ಮುಖರ್ಜಿಯವರು ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷರಾಗಿ ಇದ್ದರು.

Notes By : Kannada Kanaja Android App
(ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸ್ವಯಂ ತಯಾರಿಗಾಗಿ ಇಂದೇ "Kannada Kanaja" ಆಂಡ್ರಾಯ್ಡ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ )
App Download Link
https://play.google.com/store/apps/details?id=com.app.kkmwqsomnbaruonjfshgtxqbldlvpvjhzaeiitxey

Post a Comment

0 Comments