ಭಾರತದ ಸಂವಿಧಾನ

ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ಡಿಸೆಂಬರ್ ೯, ೧೯೪೭ ರಿಂದ ನವೆಂಬರ್ ೨೬, ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ಜನವರಿ ೨೬, ೧೯೫೦ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಭಾರತದ ಸಂವಿಧಾನ ಇಲ್ಲಿಯ ವರಿಗಿನ ಮೂಲದ ಪ್ರಕಾರ ೩೬೫( ನಂತರ೪೬೭) ವಿಧಿಗಳು ೨೨ (ನಂತರ೨೫)ಭಾಗಗಳಲ್ಲಿಯೂ, ೮(ನಂತರ ೧೨) ಅನುಚ್ಛೇದಗಳನ್ನೂ,, ೧೧೮ ತಿದ್ದುಪಡಿಗಳನ್ನೂ ಹೊಂದಿರುವ ಈ ಸಂವಿಧಾನ ಯಾವುದೇ ದೇಶದ ಲಿಖಿತ ಸಂವಿಧಾನಕ್ಕಿಂತ ದೀರ್ಘವಾದುದ್ದು. ಈ ಸಂವಿಧಾನದ ಆಂಗ್ಲ ಭಾಷೆಯ ಆವೃತ್ತಿಯು ೧,೧೭,೩೬೯ ಶಬ್ದಗಳನ್ನು ಹೊಂದಿದೆ.

Notes By : Kannada Kanaja Android App
(ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸ್ವಯಂ ತಯಾರಿಗಾಗಿ ಇಂದೇ "Kannada Kanaja" ಆಂಡ್ರಾಯ್ಡ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ )
App Download Link
https://play.google.com/store/apps/details?id=com.app.kkmwqsomnbaruonjfshgtxqbldlvpvjhzaeiitxey

Post a Comment

0 Comments