ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರು (CAG)

🔘ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರು (CAG)

➡️ನಮ್ಮ ದೇಶದ ಸಾರ್ವಜನಿಕ ಹಣಕಾಸು ನಿಯಂತ್ರಣದಲ್ಲಿ  ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರ ಪಾತ್ರ ಅತ್ಯಂತ ಮಹತ್ವಪೂರ್ಣದ್ದಾಗಿದೆ.  2-G ಸೆಕ್ಟ್ರಮ್,  ಕಾಮನ್ ವೆಲ್ತ್ ಗೇಮ್ಸ್ ಮತ್ತು ಕೋಲ್ ಗೇಟ್ ದಂಥ ಪ್ರಮುಖ ಅವ್ಯವಹಾರದ ಹಗರಣಗಳು ಬೆಳಕಿಗೆ ಬಂದಿದ್ದು ಮಹಾಲೆಕ್ಕ ಪರಿಶೋಧಕರಿಂದಲೇ. 

➡️CAG ಯನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ( PAC - Public Account Committee ) ಯೊಂದಿಗೆ ಜೋಡಿಸಲಾಗಿತ್ತು.  ಇದನ್ನು PAC ಯಿಂದ ಪ್ರತ್ಯೇಕಿಸಿ ಸ್ವತಂತ್ರವಾಗಿಸಿದವರು 2006 ರಿಂದ 2013 ರವರೆಗೆ CAG ಆಗಿದ್ದ ವಿನೋದ್ ರಾಯ್ ರವರು.

🔘ಮುಖ್ಯಾಂಶಗಳು:

➡️ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರನ್ನು  ರಾಷ್ಟ್ರಪತಿಯವರು ನೇಮಿಸುತ್ತಾರೆ.

➡️ಸಂವಿಧಾನದ 148 ನೇ ಅನುಚ್ಛೇದದ ಪ್ರಕಾರ ಭಾರತಕ್ಕೆ ಒಬ್ಬ  ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರು ಇರುತ್ತಾರೆ.

➡️ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರಾಗಿ ನೇಮಕಗೊಂಡ ಪ್ರತಿಯೊಬ್ಬ ವ್ಯಕ್ತಿಯು ತನ್ನ ಅಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಮುಂಚೆ ರಾಷ್ಟ್ರಪತಿಯ ಮುಂದೆ ಅಥವಾ ರಾಷ್ಟ್ರಪತಿಯು ಆ ಬಗ್ಗೆ ನೇಮಕ ಮಾಡಿದ ಒಬ್ಬ ವ್ಯಕ್ತಿಯ ಮುಂದೆ  ಸಂವಿಧಾನದ 3 ನೇ ಅನುಸೂಚಿಯಲ್ಲಿ ಆ ಉದ್ದೇಶಕ್ಕಾಗಿ ಕೊಟ್ಟಿರುವ ನಮೂನೆಗೆ ಅನುಸಾರವಾಗಿ ಪ್ರಮಾಣ ವಚನವನ್ನು ಸ್ವಿಕರಿಸತಕ್ಕದ್ದಾಗಿದೆ.

➡️ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರ ವೇತನ ಮತ್ತು ಸೇವೆಯ ಕರ್ತವ್ಯಗಳು ಸಂಸತ್ತು ಕಾನೂನಿನ ಮೂಲಕ ನಿರ್ಧರಿಸಬಹುದಾಗಿದ್ದು,  ಅವುಗಳನ್ನು ಸಂವಿಧಾನದ 2 ನೇ ಅನುಸೂಚಿಯಲ್ಲಿ ತಿಳಿಸಲಾಗಿದೆ.
➡️ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರ ಅಧಿಕಾರಾವಧಿ 6 ವರ್ಷಗಳು ಅಥವಾ 65 ವರ್ಷ ಪೂರ್ಣಗೊಳ್ಳುವವರೆಗೆ ಸೇವೆ ಸಲ್ಲಿಸತಕ್ಕದ್ದು.  ಇವರ ವೇತನ ಸುಪ್ರೀಂ ಕೋರ್ಟಿನ ನ್ಯಾಯಾಧೀಶರ ವೇತನಕ್ಕೆ ಸಮನಾಗಿರುತ್ತದೆ ಹಾಗೂ ಇವರ ವೇತನ ಮತ್ತು ಇತರ ಸೇವಾ ನಿಯಮಗಳು ಸಂಸತ್ತಿನ ಕಾಯ್ದೆಯ ಪ್ರಕಾರ ಇರುತ್ತದೆ.

➡️ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರು ರಾಜ್ಯ ಮತ್ತು ಕೇಂದ್ರಕ್ಕೆ ಸಂಬಂಧಿಸಿದ ಅಕೌಂಟನ್ನು ಪರಿಶೀಲಿಸಿ ರಾಷ್ಟ್ರಪತಿಗಳಿಗೆ ವರದಿಯನ್ನು ಒಪ್ಪಿಸುತ್ತಾರೆ.  ರಾಷ್ಟ್ರಪತಿಯವರು ಸಂಸತ್ತಿನ ಮುಂದಿಡುತ್ತಾರೆ.

➡️ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರು (CAG) ಕೇಂದ್ರ ಮತ್ತು ರಾಜ್ಯಗಳ ಹಾಗೂ ಸಂಸತ್ತಿನ ಕಾಯ್ದೆಯನ್ವಯ  ಸ್ಥಾಪಿತವಾದ ಇತರ ಯಾವುದೇ ಪ್ರಾಧಿಕಾರದ ಅಥವಾ ಮಂಡಳಿಯ,  ಸರ್ಕಾರಿ ಕಂಪನಿಗಳ ಲೆಕ್ಕ ಖಾತೆಯನ್ನು ಸಹ ಆಡಿಟ್ ಮಾಡುತ್ತಾರೆ.
➡️(CAG) ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರನ್ನು ಪದವಿಯಿಂದ ತೆಗೆದುಹಾಕಬೇಕಾದರೆ ಸಂಸತ್ತಿನ ತೀರ್ಮಾನದ ಮೇಲೆ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬಹುದು. ಪ್ರಧಾನಮಂತ್ರಿ ಮತ್ತು ಕೇಂದ್ರ ಕಾರ್ಯಾಂಗಕ್ಕೆ  ಇವರನ್ನು ತೆಗೆಯುವ ಅಧಿಕಾರ ಇರುವುದಿಲ್ಲ. ಮಹಾಭಿಯೋಗದ ಮೂಲಕ ಮಾತ್ರ ತೆಗೆಯಬಹುದು. 

➡️ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರು ನಿವೃ ತ್ತಿ  ಹೊಂದಿದ ಮೇಲೆ ಭಾರತ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಅಧೀನದಲ್ಲಿರುವ ಯಾವುದೇ ಹುದ್ದೆಗೆ ಅರ್ಹರಾಗಿರುವುದಿಲ್ಲ.

Post a Comment

0 Comments